Delhi 6

 ಮಸಕ್ಕಲಿ..ಮಸಕ್ಕಲಿ.. ಮೌಲಾ..ಮೌಲಾ.. ದಂಥ ಹಾಡಿಲ್ಲದೇ ಹೋದಲ್ಲಿ ಇಷ್ಟು ಆಸೆಯಿಂದ ಬಂದು ಡಾಕ್ಯುಮೆಂಟರಿ ನೋಡುವುದಾಯ್ತಲ್ಲ ಎನಿಸುತ್ತಿತ್ತು.. ನಾವೂ ಮಂಗ ಆದೆವಲ್ಲ ಅನ್ನಿಸದೆ ಇರುತ್ತಿರಲಿಲ್ಲ. ಡೆಲ್ಲಿ 6 ಚಿತ್ರ ನೋಡಿ ಬಂದ ನಂತರ ಹೊಳೆದದ್ದಿಷ್ಟು… sonam

ನಮ್ಮೆಲ್ಲರೊಳಗೂ ಒಂದು ಕರಿ ಬಂದರ್ ಇರುತ್ತೆ.. ಬೇರೆಯವರಿಗೆ ತೊಂದರೆ ಕೊಟ್ಟು ತಾನು ಖುಷಿ ಪಡುತ್ತಾ ಇರುತ್ತೆ. ಮೂಲಭೂತವಾಗಿ ನಮ್ಮೊಳಗೆ ಅಡಕವಾಗಿರುವ ಈ ಸ್ವಭಾವದ ಎಳೆಯ ಮೇಲೆ ಇಡೀ ಕಥೆ ಸಾಗುತ್ತದೆ. ಇದಕ್ಕೆ ಸಪೋಟರ್ು ಎಂಬಂತೆ ಹಿಂದೊಮ್ಮೆ ದೆಹಲಿಯಲ್ಲಿ ಆಗಿದ್ದ ಮಂಗನ ಕಾಟವನ್ನು ಇಲ್ಲೂ ಬಳಸಿಕೊಂಡಿದ್ದಾರೆ. ಅಭಿಷೇಕ್, ವಹೀದಾರಂಥ ಅಜ್ಜಿ ಮೊಮ್ಮಗ, ಅವರ ನಡುವಿನ ಅನುಪಮ ಭಾವ ಬಂಧ, ಜತೆಗೆ ಸೋನಂ ಕಪೂರ್ ಎಂಬ ಚಿನಕುರುಳಿಯನ್ನು ಆಯ್ಕೆ ಮಾಡಿಕೊಂಡು ಈ ಚಿತ್ರ ಒಂದು ಡಾಕ್ಯುಮೆಂಟರಿ ಆಗುವ ಅಪಾಯದಿಂದ ತಪ್ಪಿಸಿಕೊಂಡಿದ್ದಾರೆ ರಾಕೇಶ್ ಮೆಹ್ರಾ. ಭಾರತೀಯ ಭಾವಸೂಕ್ಷ್ಮತೆ, ಕೋಮು ಸಂವೇದನೆ, ನಮ್ಮ ದೇಶದ ವಿಭಿನ್ನತೆ, ಜತೆಗೇ ತಳುಕು ಹಾಕಿಕೊಂಡಿರುವ ನಮ್ಮ ಸಂಸ್ಕೃತಿಯ ಅನನ್ಯತೆಗಳನ್ನು ಸುಂದರವಾಗಿ ಹೆಣೆದು ಚಂದದೊಂದು ಚಿತ್ರ ಮಾಡಿದ್ದಾರೆ.

ಅಜ್ಜಿಯ(ವಹೀದಾ) ಕೊನೆಗಾಲಕ್ಕೆ ನೆಮ್ಮದಿಗಾಗಿ ಆಕೆಯನ್ನು ಮೊಮ್ಮಗ(ಅಭಿಷೇಕ್) ದೆಹಲಿಗೆ ಕರ್ಕೊಂಡು ಬರ್ತಾನೆ. ಅವರು ಬಂದಾಗ ಇಲ್ಲಿ “ಕಾಲಾ ಬಂದರ್”ನದೇ ಕಾರುಬಾರು ನಡೆಯುತ್ತಿರುತ್ತದೆ. ಯಾರೋ ಕಿಡಿಗೇಡಿಗಳು ‘ಮಂಗ’ನ ಹೆಸರಿನಲ್ಲಿ ಜನರನ್ನು ಹೆದರಿಸುತ್ತಾ ಒಂದು ತೆರನಾದ ಮಾಸ್ ಹಿಪ್ನಾಟಿಸಂ ಸೃಷ್ಟಿ ಮಾಡಿರುತ್ತಾರೆ ಮತ್ತು ಅದೇ ಅವರ ಸಂತೋಷ. ಮೊಮ್ಮಗ ರೋಷನ್ಗೆ ಇದೆಲ್ಲಾ ಹಿಡಿಸದೆ ಮತ್ತೆ ವಿದೇಶಕ್ಕೆ ತೆರಳೋಣ ಎಂದಾಗ ಅಜ್ಜಿ ಒಪ್ಪದೆ ಆಕೆಗಾಗಿ ಇಲ್ಲೇ ಉಳಿಯುತ್ತಾನೆ. ಇದೆಲ್ಲದರ ಮಧ್ಯೆ “ಬಿಟ್ಟು”(ಸೋನಂ) ಪರಿಚಯವೂ ಆಗಿರುತ್ತದೆ ಮತ್ತು ಆಕೆ ಇವನಿಗೆ ಚೂರೂ ಮಾರುಹೋಗಿರುವುದಿಲ್ಲ!! ಟಿಪಿಕಲ್ ಭಾರತೀಯ ಮಧ್ಯಮ ವರ್ಗದ ಮನೋಭಾವದ ಅಪ್ಪನ ಮಗಳಾದ ಆಕೆಗೆ ಇಂಡಿಯನ್ ಐಡೋಲ್ ಆಗಿ ತನ್ನ ಐಡೆಂಟಿಟಿ ತೋರಿಸಿಕೊಳ್ಳುವ ಬಯಕೆಯಾದರೆ ಅವರಪ್ಪನಿಗೆ ಮಗಳ ಮದುವೆ ಮಾಡಿ ಜವಾಬ್ದಾರಿ ಕಳಕೊಳ್ಳುವ ತರಾತುರಿ. ಈ ಸಂದರ್ಭದಲ್ಲಿ ಆಕೆಗೆ ರೋಷನ್ನೊಳಗೊಬ್ಬ ಗೆಳೆಯ ಸಿಗುತ್ತಾನೆ ಮತ್ತು ಆತನೂ ವಿಭಿನ್ನ ಮನೋಭಾವದ ಈಕೆಗೆ ಸೋಲುತ್ತಾನೆ. ಅಷ್ಟರಲ್ಲಿ ಕಾಲಾ ಬಂದರ್ ನೆಪದಲ್ಲಿ ಹಿಂದು ಮುಸ್ಲಿಂ ಗಲಾಟೆ ಪ್ರಾರಂಭವಾಗುತ್ತದೆ. ಸೌಹಾರ್ದತೆ ತರಲು ಪ್ರಯತ್ನಿಸುವ ರೋಷನ್ ಎಲ್ಲರಿಂದ ಬೈಗುಳ ತಿನ್ನುತ್ತಾನೆ. ಈಗ ಅಜ್ಜಿಗೇ ವಿದೇಶಕ್ಕೆ ಹೋಗಬೇಕೆನಿಸುತ್ತದೆ. ಆದರೆ ಪ್ರಿಯತಮೆಯೂರು ದೆಹಲಿಯ ಸೆಳೆತ ಮೊಮ್ಮಗನನ್ನು ಕಟ್ಟಿ ಹಾಕಿದೆ.  ಇಷ್ಟೆಲ್ಲ ಆಗುವಾಗ ತನ್ನ ಹುಡುಗಿ ಇಂಡಿಯನ್ ಐಡೋಲ್ ಆಗುವ ಹಂಬಲದಿಂದ ಅಲ್ಲಿನ ಖತರ್ನಾಕ್ ಫೋಟೋಗ್ರಾಫರ್ ಜತೆ ಮುಂಬೈಗೆ ಓಡಿ ಹೋಗುತ್ತಾಳೆಂಬುದು ಗೊತ್ತಾಗಿ ಆತಂಕವಾಗುತ್ತದೆ. ಈಗ ತಾನು ಕಾಲಾ ಬಂದರ್ ಸೃಷ್ಟಿಸಿದ ಭಯದ ಅಡ್ವಾಂಟೇಜ್ ತೆಗೆದುಕೊಳ್ಳ ಬಯಸಿದ ಹುಡುಗ ಮಂಗನ ವೇಷದಲ್ಲಿ ಆಕೆಯನ್ನು ತಡೆಯಲು ಹೋಗುತ್ತಾನೆ. ಅದೇ ಸಮಯದಲ್ಲಿ ಮಂಗನನ್ನು ಹುಡುಕಿಕೊಂಡು ಬಂದವರ ಕೈಗೆ ಸಿಕ್ಕಿಬಿದ್ದು ಹೊಡೆತ ತಿನ್ನುತ್ತಾನೆ. ಆ ಕ್ಷಣದವರೆಗೂ ತಮ್ಮ ತಮ್ಮಲ್ಲಿ ಹೊಡೆದಾಡುತ್ತಿದ್ದ ಎರಡೂ ಕೋಮಿನವರು ತಮ್ಮ ಜೀವದ ಪ್ರಶ್ನೆ ಬಂದಾಗ ಧರ್ಮ ಮರೆತು ಒಂದಾಗುತ್ತಾರೆ. ಜಾತಿ ಧರ್ಮ ಬೇಧ ತೋರದೆ ಎಲ್ಲರನ್ನು ಪ್ರೀತಿಸಿದವನನ್ನು ಎರಡೂ ಧರ್ಮದವರು ಸೇರಿ ಸಾಯ ಹೊಡೆಯುತ್ತಾರೆ. ಅಲ್ಲಿಗೆ ಮನದಲ್ಲಿ ಹೊತ್ತಿ ಉರಿಯುತ್ತಿದ್ದ ಕೋಪ ಆರುತ್ತದೆ. ಎಲ್ಲರು ತಣ್ಣಗಾಗುತ್ತಾರೆ. delhi 6

ಸಾವರಿಯಾದಲ್ಲಿ ನೋಡಿದಾಗ ಏನೂ ಅನಿಸದ ಹುಡುಗಿ ಸೋನಂ ಇಲ್ಲಿ ಪೂತರ್ಿಯಾಗಿ ಮನತುಂಬಿಕೊಳ್ಳುತ್ತಾಳೆ. ಅಭಿಷೇಕ್ಗೂ ಫುಲ್ ಮಾಕ್ಸರ್್. ಪಾರಿವಾಳ ಚಂದ..ಚಂದ.. ವಹೀದಾ ಈಗಲೂ ಸೌಂದರ್ಯವತಿ… ಕಿತ್ತಾಡುತ್ತಲೇ ಇದ್ದರೂ ಅಂತರಂಗದಲ್ಲೆಲ್ಲೋ ಸಂಬಂಧವನ್ನು ಪೋಷಿಸುತ್ತಲೇ ಬರುವ ಅಣ್ಣ ತಮ್ಮ ನಾಗಿ ಓಂಪುರಿ ಮತ್ತು ಪವನ್ ಮಲ್ಹೋತ್ರಾ, ಅಸ್ಪೃಶ್ಯಳೆನಿಸಿಕೊಂಡರೂ ಸದಾ ಮಾನವೀಯವಾಗಿ ತುಡಿಯುವ ಪಾತ್ರದಲ್ಲಿ ದಿವ್ಯಾ ದತ್ತಾ, ಫ್ಯಾಮಿಲಿ ಫ್ರೆಂಡ್ ಆಗಿದ್ದು ನಿರಂತರ ಸ್ಪಂದಿಸುತ್ತ ಅವರ ಮನೆಯವನೇ ಆಗುವ ರಿಷಿ ಕಪೂರ್, ಅತುಲ್ ಕುಲಕರ್ಣಿ  ಎಲ್ಲರೂ ತಮ್ಮ ಪಾತ್ರಕ್ಕೆ ಪೂರ್ಣ ಜೀವ ತುಂಬಿದ್ದಾರೆ.

ರಂಗ್ ದೇ ಬಸಂತಿಯ ಥರಾ ಇಲ್ಲಿ ಅಬ್ಬರವಿಲ್ಲ, ಅಂಥದ್ದೊಂದು ಕೆಚ್ಚು ಹೈಲೈಟ್ ಆಗುವುದಿಲ್ಲ; ಆದರೆ ಮೌನವಾಗಿಯೇ ದೇಶವನ್ನು ಒಂದು ಮಾಡುವ ತುಡಿತವನ್ನು ಅಭಿಷೇಕ್ ಬಚ್ಚನ್ ಎಂಬ ಚಿತ್ರಿಕೆಯ ಮೂಲಕ ಹೇಳುತ್ತಾ ಸಾಗುತ್ತಾರೆ ಮೆಹ್ರಾ. ಅದ್ಭುತ ಎಂಬಂತೇನಿಲ್ಲದಿದ್ರೂ ಒಂದು ಬಾರಿ “ನೋಡಬಲ್” ಎನ್ನಬಹುದಾದ ಚಿತ್ರವಂತೂ ಖಂಡಿತಾ ಹೌದು. ಪುರುಸೊತ್ತಿಲ್ಲದಿದ್ದರೂ ಬಿಡುವು ಮಾಡಿಕೊಂಡು ಚೆಂದದ ಸೋನಂ, ಅಭಿಷೇಕ್, ಪಾರಿವಾಳ, ವಹೀದಾ ನೋಡಲಿಕ್ಕಾದರೂ ಹೋಗಿ ಬನ್ನಿ…. delhi-6

ಚಿತ್ರಗಳು : Netನಿಂದ ಕದ್ದದ್ದು

ಯುಗಾದಿ ಹಾರೈಕೆ

ಈ ಜೀವನ  ಬೇವು-ಬೆಲ್ಲ
ಬಲ್ಲಾತಗೆ ನೋವೇ ಇಲ್ಲ….
ಒಲಿದು ಬರಲಿ ಪ್ರೇಮ
ಕೈಗೂಡಲಿ ಬಯಕೆ…
ಯುಗಾದಿಯ ಸವಿಗಿದು
ಎದೆಯಾಳದ ಹರಕೆ…

ಯುಗಾದಿ

ಹ್ಹ ಹ್ಹ ಹ್ಹ ಹ್ಹಾ !!!

lovebeats

ಕೆಲಸ ಖಾಲಿ ಇದೆ..

ಸುಗಂಧ ದ್ರವ್ಯಗಳ ತಯಾರಿಕಾ ಕಂಪನಿಗೆ ಒಂದಷ್ಟು ಜನ ನೌಕರರ ಅವಶ್ಯಕತೆಯಿತ್ತು. ಕಂಪನಿ ಜಾಹೀರಾತು ನೀಡಿತು.
*********
ನಮ್ಮ ಕಂಪನಿ ಕೆಲಸಕ್ಕೆ 5 ಜನ ಬೇಕಾಗಿದ್ದಾರೆ; ಕೂಡಲೇ ನೇಮಕಾತಿ. ಆಸಕ್ತರು ಈ ಕ್ಷಣ ಸಂಪಕರ್ಿಸಿ.
1. ತಿಂಗಳ ಸಂಬಳ ರೂ. 52,000/=
2. ಹೆಲ್ತ್ ಬೆನಿಫಿಟ್ಸ್
3. ಕೆಲಸ ಅವಧಿ ದಿನಕ್ಕೆ 6 ಘಂಟೆ ಮಾತ್ರ
4. ವಾರಕ್ಕೆ ಐದು ದಿನ ಕೆಲಸ
5. ವಾಹನ ಸೌಲಭ್ಯವಿದೆ
6. ಊಟ ತಿಂಡಿ ಉಚಿತ
7. ತಿಂಗಳಿಗೆ ರೂ.8500/= ಗಳ ವೈದ್ಯಕೀಯ ಸೌಲಭ್ಯ

ನಿಬಂಧನೆಗಳು ಇಂತಿವೆ :
1. ಅತ್ಯುತ್ತಮವೆನಿಸುವ ಆಘ್ರಾಣ ಶಕ್ತಿ ಇರಬೇಕು.
2. ಮೂಗನ್ನು ಪ್ರಾಯೋಗಿಕವಾಗಿ ಬಳಸುವ ಚಾತುರ್ಯ ಹೊಂದಿರಬೇಕು

ಕೆಲಸದ ಡೆಮೋ ಹೀಗಿದೆ

JOB OPENINGS

JOB OPENINGS

ನಿಮಗೆ ಆಸಕ್ತಿ ಇದೆಯಾ ?

ಪ್ರೇಮದ ಮಾಯೆಯ ಬೆನ್ನತ್ತಿ…

ಪ್ರೇಮ ಪ್ರೇಮ

ಪ್ರೇಮ ಪ್ರೇಮ

ಇದು ನಂಗೆ ಬಂದ ಎಸ್.ಎಂ.ಎಸ್. ಎಷ್ಟು ಚೆನ್ನಾಗಿದೆ ಅನಿಸಿತು … ಅದಕ್ಕೆ ಇಲ್ಲಿ ಹಾಕಿದೆ.. 

 

“The only court which forgives all my sins is my mom’s heart”